ಬೆಂಗಳೂರಿನಲ್ಲಿ ಮಾಸ್ಕ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ: 57.39 ಲಕ್ಷ ರೂ. ಸಂಗ್ರಹ… ಬೆಂಗಳೂರು,ಜು,4,2020(..): ಬೆಂಗಳೂರಿನಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಓಡಾಡುವವರಿಗೆ ಬಿಬಿಎಂಪಿಯಿಂದ ದಂಡ ವಿಧಿಸಲಾಗಿದ್ದು ಜೂನ್ ತಿಂಗಳಲ್ಲಿ ಒಟ್ಟು 57.39 ಲಕ್ಷ ರೂ. ಸಂಗ್ರಹ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ಹಿನ್ನೆಲೆ ನಗರಾದ್ಯಂತ ಮಾರ್ಷಲ್‌ಗಳು ಹಾಗೂ ಪೊಲೀಸ್ ಅಧಿಕಾರಿಗಳು ಎಲ್ಲಾ 198 ವಾರ್ಡ್ ಗಳ ಸಾರ್ವಜನಿಕ ಸ್ಥಳಗಳಲ್ಲಿ ಮುಖಗವಸು(ಮಾಸ್ಕ್) ಧರಿಸದೇ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಓಡಾಡುವ/ವಾಹನಗಳಲ್ಲಿ ಸಂಚರಿಸುವ ವ್ಯಕ್ತಿಗಳಿಗೆ ದಂಡ ವಿಧಿಸಲಾಗುತ್ತಿದೆ. ಅದರಂತೆ ಜೂನ್ ತಿಂಗಳಲ್ಲಿ ಮಾಸ್ಕ್ ಧರಿಸದ 27,421 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 1,267 ಮಂದಿ ಸೇರಿದಂತೆ 28,688 ಮಂದಿಯಿಂದ ಒಟ್ಟು 57.39 ಲಕ್ಷ ರೂ. ದಂಡ ಸಂಗ್ರಹ ಮಾಡಲಾಗಿದೆ. ಕರೋನಾ ಅಟ್ಟಹಾಸ ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು ಹೀಗಾಗಿ ಮಾಸ್ಕ್ ಹಾಕಿಕೊಳ್ಳುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಲಾಗಿದೆ. : – – – -57.39 – .