ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು… ಮೈಸೂರು,ಜು,2,2020(..): ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆಯ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಆಲನಹಳ್ಳಿ ಗ್ರಾಮದ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. 11ವರ್ಷದ ಪ್ರೀತಂ ಮತ್ತು 12ವರ್ಷದ ಅರ್ಜುನ್ ಮೃತಪಟ್ಟವರು. ‌ಇನ್ನು ಮೃತದೇಹಗಳ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : - - - -