ಕೊರೋನಾಸೋಂಕಿಗೆ ಬೆಂಗಳೂರಿನಲ್ಲಿ ಇಬ್ಬರು , ಬಳ್ಳಾರಿಯಲ್ಲಿ ಮೂವರು ಬಲಿ.. ಬೆಂಗಳೂರು,ಜು,2,2020(..): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಇಂದು ಕೊರೋನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇಬ್ಬರು ಮಹಿಳೆಯರನ್ನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಮಹಿಳೆಯರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇನ್ನು ಬಳ್ಳಾರಿಯಲ್ಲಿ ಇಂದು ಮೂವರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ. ನಗರದ ದೇವಿನಗರದ ವೃದ್ಧೆ (75) ಹೃದಯಾಘಾತ, ಮೂತ್ರಪಿಂಡ‌ ಸಮಸ್ಯೆಯಿಂದ ಬಳಲುತ್ತಿದ್ದು, ಬುಧವಾರ ಮೃತಪಟ್ಟರು. ಸಂಡೂರು ತಾಲ್ಲೂಕಿನ ಯಶವಂತನಗರದ ಪುರುಷ (43) ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ . ಈವರೆಗೆ ಬಳ್ಳಾರಿಯಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. : - - – - – .