ಮೈಸೂರಿನಲ್ಲಿ ಓರ್ವ ಮಹಿಳೆಗೆ ಕೊರೋನಾ ಪಾಸಿಟಿವ್: ರಸ್ತೆ ಸೀಲ್ ಡೌನ್…. ಮೈಸೂರು,ಜು,2,2020(..): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು ಇಂದು ಓರ್ವ ಮಹಿಳೆಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ತ್ಯಾಗರಾಜು ರಸ್ತೆ 2ನೇ ಕ್ರಾಸ್ ಬಳಿ ವಾಸವಿದ್ದ ಮಹಿಳೆಗೆ ಕೊರೋನಾ ಸೋಂಕು ದೃಢವಾಗಿದೆ. ಹೈದರಾಬಾದ್ ನಿಂದ ಬಂದಿದ್ದ ಮಹಿಳೆ ಹೋಂ ಕ್ವಾರಂಟೈನ್ ನಲ್ಲಿದ್ದರು. ಇದೀಗ ಮಹಿಳೆಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು ಕೋವಿಡ್ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ಮಹಿಳೆ ಇದ್ದ ತ್ಯಾಗರಾಜು ರಸ್ತೆಯ ಎರಡನೇ ಕ್ರಾಸ್ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಿ ಸೀಲ್ ಡೌನ್ ಮಾಡಲಾಗಿದೆ. : – – -