ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಬೆಂಗಳೂರು ಮೂಲದ ಇಬ್ಬರು ವಶಕ್ಕೆ. ಬೆಂಗಳೂರು, ಮಾರ್ಚ್​​ 26,2024(..):ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ () ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶನಿವಾರ (ಮಾರ್ಚ್ 23) ಸಂಜೆಯೇ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ವಶಕ್ಕೆ ಪಡೆದ ಇಬ್ಬರು ಸಹ ಬಾಂಬರ್​ ಜೊತೆ ನೇರ ಸಂಪರ್ಕದಲ್ಲಿದ್ದರು ಎಂಬುವುದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಇಬ್ಬರನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್​ 1 ರಂದು ಬಾಂಬ್ ಬ್ಲಾಸ್ಟ್ ಸಂಭವಿಸಿತ್ತು. ಪ್ರಕರಣ ತನಿಖೆಯನ್ನು ಎನ್​ಐಎಗೆ ವಹಿಸಲಾಗಿದ್ದು, ಪ್ರಕರಣ ತನಿಖೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು, ಆರೋಪಿ ಬಂಧನಕ್ಕೆ ಶೋಧಕಾರ್ಯ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮಾರ್ಚ್ 13 ರಂದು ಎನ್​ಐಎ ಅಧಿಕಾರಿಗಳು ಬಳ್ಳಾರಿಯಲ್ಲಿ ಶಬ್ಬೀರ್ ಎಂಬಾತನನ್ನು ಬಂಧಿಸಿದ್ದರು. : Café, , .