ಕೊಡಗು ಜಿಲ್ಲೆಯಲ್ಲಿ ಮತ್ತೆ ಕೊರೋನಾ ಸ್ಫೋಟ…. ಕೊಡಗು,ಜು,1,2020(..): ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸ್ಪೋಟಗೊಂಡಿದೆ. ಇಂದು ಜಿಲ್ಲೆಯಲ್ಲಿ ನಾಲ್ವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಸೋಂಕಿತ ವ್ಯಕ್ತಿ ಸಂಪರ್ಕದಲ್ಲಿದ್ದ ನಾಲ್ಕು ಮಂದಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. 3 ತಿಂಗಳ ಮಗುವಿಗೂ ಮಹಾಮಾರಿ ಕೊರೋನಾ ತಗುಲಿದ್ದು, 6 ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಇನ್ನು 56 ವರ್ಷದ ವ್ಯಕ್ತಿ ಹಾಗೂ 87 ವರ್ಷದ ವ್ಯಕ್ತಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಾಲ್ವರು ಸೋಂಕಿತರು ವಿರಾಜಪೇಟೆ ತಾಲ್ಲೂಕಿನ ಹುಂಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಮೂಲಕ ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಒಟ್ಟು 58ಕ್ಕೆ ಏರಿಕೆಯಾಗಿದೆ. : - -