ಪತ್ರಿಕಾ ದಿನಾಚಾರಣೆ: ನಾಳೆ ಮೈಸೂರಿನಲ್ಲಿ ವ್ಯಾಯಾಮ ಶಾಲೆ ಉದ್ಘಾಟನೆ ಮತ್ತು ಅಭಿನಂದನಾ ಕಾರ್ಯಕ್ರಮ…. ಮೈಸೂರು,ಜೂ,30,2020(..): ಪತ್ರಿಕಾ ದಿನಾಚಾರಣೆ ಅಂಗವಾಗಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಾಳೆ ವ್ಯಾಯಾಮ ಶಾಲೆ ಉದ್ಘಾಟನೆ, ಅಭಿನಂದನಾ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ನಗರದ ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ಮಠದ ಶ್ರೀಗಳಾದ ಶಿವರಾತ್ರಿ ದೇಸಿಕೇಂದ್ರ ಸ್ವಾಮೀಜಿಗಳು ವ್ಯಾಯಾಮ ಶಾಲೆಯನ್ನ ಉದ್ಘಾಟನೆ ಮಾಡಲಿದ್ದಾರೆ. ಪ್ರಜಾನುಡಿ ದಿನಪತ್ರಿಕೆ ಪ್ರಕಾಶಕರು ಮತ್ತು ಮಾಜಿ ಶಾಸಕರಾದ ವಾಸು ಅವರು ಪತ್ರಿಕಾ ದಿನಾಚಾರಣೆ ಕಾರ್ಯಕ್ರಮವನ್ನ ಉದ್ಘಾಟನೆ ಮಾಡಲಿದ್ದಾರೆ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಅವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಟಿಎಸ್ ಆರ್ ಪ್ರಶಸ್ತಿ ಪುರಸ್ಕೃತರು, ಪ್ರಜಾನುಡಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಡಿ.ಮಹದೇವಪ್ಪ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸುಧರ್ಮಾ ಸಂಸ್ಕೃತ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಸಂಪತ್ ಕುಮಾರ್ ಹಾಗೂ ವಿಜಯಲಕ್ಷ್ಮಿ ಅಭಿನಂದಿತರಾಗಿದ್ದು ಇವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸನ್ಮಾನಿಸಲಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಿ.ಕೆ ಮಹೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬಾಬು, ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. : - – – –