ಕೊರೋನಾ ನೆರವು ಪಡೆಯುವ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ… ಬೆಂಗಳೂರು,ಜೂ,29,2020(..): ಕೊರೋನಾ ದಿಂದಾಗಿ ಲಾಕ್ ಡೌನ್ ಮಾಡಿದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದವರಿಗೆ ನೀಡಲಾಗುತ್ತಿರುವ ಪರಿಹಾರ ನೆರವು ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ಲಾಕ್ಡೌನ್ ನಿಂದ ಸಂಕಷ್ಟಕ್ಕೊಳಗಾಗಿದ್ದವರಿಗೆ 5ಸಾವಿರ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಅಗಸರು ಹಾಗೂ ಕ್ಷೌರಿಕರಿಗೆ ನೆರವು ನೀಡಲು ಸರ್ಕಾರ ಅರ್ಜಿ ಆಹ್ವಾನಿಸಿತ್ತು. ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸ ಬೇಕಾಗಿತ್ತು. ಜೂನ್ 30ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗಧಿಪಡಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನ ಜುಲೈ10ರವರೆಗೆ ವಿಸ್ತರಣೆ‌ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅರ್ಜಿ ಸಲ್ಲಿಸಲು ಮತ್ತೆ 10ದಿನಗಳ ಕಾಲಾವಕಾಶವನ್ನ ಸರ್ಕಾರ ನೀಡಿದೆ. : – - – -.