ದೇಶದಲ್ಲಿ ಒಂದೇ ದಿನ 18,522 ಮಂದಿಗೆ ಕೊರೋನಾ ಸೋಂಕು ಪತ್ತೆ… ನವದೆಹಲಿ,ಜೂ,30,2020(..): ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದ್ದು ಒಂದೇ ದಿನ ಕಳೆದ 18,522 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 5,66,840ಕ್ಕೆ ಏರಿಕೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇನ್ನು ಒಂದೇ ದಿನ ಮಹಾಮಾರಿ ವೈರಸ್ ಗೆ 418 ಮಂದಿ ಬಲಿಯಾಗಿದ್ದು, ಈ ವರೆಗೂ ವೈರಸ್’ನಿಂದ ಸಾವನ್ನಪ್ಪಿದವರ ಸಂಖ್ಯೆ 16,893ಕ್ಕೆ ಏರಿಕೆಯಾಗಿದೆ. 5,66,840 ಮಂದಿ ಸೋಂಕಿತರ ಪೈಕಿ 3,34,822 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : 18,522 – - .