ತೈಲಬೆಲೆ ಏರಿಕೆಗೆ ಖಂಡನೆ: ಮೈಸೂರಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ… ಮೈಸೂರು,ಜೂ,29,2020(..): ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಭವನದ ಮುಂದೆ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು , ರಾಜ್ಯ ,ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಭಟನೆ ಎಂಎಲ್ ಸಿ ಧರ್ಮಸೇನಾ, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ಕಾಂಗ್ರೆಸ್ ನಗರಧ್ಯಕ್ಷ ಆರ್ ಮೂರ್ತಿ, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಸೇರಿ ಸ್ಥಳೀಯ ಮುಖಂಡರು ಭಾಗಿಯಾಗಿದ್ದರು. ಕೇಂದ್ರ ಸರ್ಕಾರ ದಿನೇ ದಿನೇ ತೈಲ ಬೆಲೆ ಏರಿಕೆ ಮಾಡುತ್ತಿದೆ ಹಾಗೂ ಮಹಾಮಾರಿ ಕೊರೋನಾವನ್ನ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರೆಡು ವಿಫಲವಾಗಿವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದರು. ಈ ಕುರಿತು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಿದರು. ಇದೇ ವೇಳೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಸೈಕಲ್ ಏರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದರು. : - - - - –