‘ಕೈ’ ಅಭ್ಯರ್ಥಿ ಯುವಕ ಎಂದು ನಿರ್ಲಕ್ಷಿಸಲ್ಲ: ಚುನಾವಣೆ ಗಂಭೀರವಾಗಿ ಪರಿಗಣನೆ- ಜಗದೀಶ್ ಶೆಟ್ಟರ್. ಹುಬ್ಬಳ್ಳಿ,ಮಾರ್ಚ್,25,2024(..):ಬೆಳಗಾವಿ ಕ್ಷೇತ್ರದಿಂದ ನನಗೆ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಯುವಕ ಎಂಬ ಕಾರಣಕ್ಕೆ ನಿರ್ಲಕ್ಷ್ಯ ಮಾಡುವುದಿಲ್ಲ. ಚುನಾವಣೆಯನ್ನ ಗಂಭೀರವಾಗಿ ಪರಿಗಣನೆ ಮಾಡಿದ್ದೇವೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ನಾನು ಬುಧವಾರದಿಂದ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುತ್ತೇನೆ. ಈ ಕುರಿತಂತೆ ಬೆಳಗಾವಿ ನಾಯಕರ ಜೊತೆಗೆ ಮಾತನಾಡಿದ್ದೇವೆ. ಬೆಳಗಾವಿಯಲ್ಲಿ ಎಲ್ಲ ಬಿಜೆಪಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸೋಣ ಎಂದು ಹೇಳಿದ್ದಾರೆ. ಹುಬ್ಬಳ್ಳಿ ನನ್ನ ಜನ್ಮಭೂಮಿ, ಬೆಳಗಾವಿ ನನ್ನ ಕರ್ಮಭೂಮಿ. ಬೆಳಗಾವಿಯನ್ನು ಕರ್ಮಭೂಮಿಯಾಗಿ ತೆಗೆದುಕೊಳ್ಳುತ್ತೇನೆ ಎಂದರು. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಯುವಕ ಎಂದು ನಿರ್ಲಕ್ಷಿಸುವುದಿಲ್ಲ. ಪ್ರಧಾನಿ ನರೇಂದ್ರ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ‌ ಪ್ರಧಾನಿಯಾಗಿ ಮಾಡಬೇಕು ಎನ್ನವುದು ಎಲ್ಲರ ಇಚ್ಛೇ ಆಗಿದೆ ಎಂದರು. ಇನ್ನು ಜನಾರ್ಧನರೆಡ್ಡಿ ಬಿಜೆಪಿ ಮರುಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಸ್ವಾಗತ. ಬಳ್ಳಾರಿ ಕೊಪ್ಪಳ ಭಾಗದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ. ಈ ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಗ ಅಸ್ತಿತ್ವ ಇರಲಿಲ್ಲ. ಈ ಸಮಯದಲ್ಲಿ ರೆಡ್ಡಿ ರಾಮುಲು ಹೋರಾಟ ಮಾಡಿದರು. ಇನ್ನೂ ಆನೇಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದರು. : – - – - – .