ಆರ್ಥಿಕ ಸುಧಾರಣೆ ಮುಖ್ಯ: ಲಾಕ್ ಡೌನ್ ಪ್ರಶ್ನೆಯೇ ಇಲ್ಲ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ… ಬೆಂಗಳೂರು,ಜೂ,26,2020(..): ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಆರ್ಥಿಕ ಸುಧಾರಣೆ ಮುಖ್ಯ , ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್-19 ನಿಯಂತ್ರಣದಲ್ಲಿ ಬೆಂಗಳೂರು ದೇಶಕ್ಕೆ ಮಾದರಿಯಾಗಿತ್ತು. ಈಗ ನಗರದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಹೀಗಾಗಿ ಬೆಂಗಳೂರಿನ ಸಚಿವರ, ಶಾಸಕರ ಸರ್ವಪಕ್ಷ ಸಭೆ ಕರೆದಿದ್ದೇನೆ. ಚರ್ಚೆ ನಡೆಸುತ್ತೇನೆ. ವಿಪಕ್ಷಗಳ ಸಲಹೆಯನ್ನ ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು. ಕೊರೋನಾ ಕಂಟ್ರೋಲ್ ನಲ್ಲಿ ನಮ್ಮ ರಾಜ್ಯ ಮಾದರಿಯಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಕಂಟ್ರೋಲ್ ಮಾಡುತ್ತೇವೆ. ಎಲ್ಲಾ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಸೋಂಕು ತಡೆಯಲು ಕ್ರಮ ಕೈಗೊಳ್ಳಬೇಕು. ಹೀಗಾದರೆ ನಿಯಂತ್ರಣ ಸಾಧ್ಯ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದರು. : – – -.