ಲಾಕ್ ಡೌನ್ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ಆಗಿಲ್ಲ- ಸಚಿವ ಮಾಧುಸ್ವಾಮಿ ಸ್ಪಷ್ಟನೆ… ಬೆಂಗಳೂರು,ಜೂ,25,2020(..): ಲಾಕ್ ಡೌನ್ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದರು. ಸಚಿವ ಸಂಪುಟ ಸಭೆ ನಡೆದ ಬಳಿಕ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳಿಗೆ ದರ ನಿಗಧಿ ಮಾಡಲಾಗಿತ್ತು. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿಲ್ಲ. ಇನ್ನು ಕೆಲ ಖಾಸಗಿ ಆಸ್ಪತ್ರೆಗಳು ದರ ಒಪ್ಪಿಲ್ಲ. ಅವರ ಜೊತೆ ಮಾತುಕತೆ ನಡೆಸಲಾಗುತ್ತೆಈಗಾಗಲೇ ಹೊರಡಿಸಿರೋ ದರ ಪಟ್ಟಿಯಲ್ಲಿ ಯಾವ ಪರಿಷ್ಕರಣೆನೂ ಮಾಡಿಲ್ಲ ಎಂದು ತಿಳಿಸಿದರು. ಖಾಸಗಿ ಸಂಘ ಸಂಸ್ಥೆಗಳಿಗೆ ಗುತ್ತಿಗೆ ಕೊಟ್ಟಿರುವ ಸರ್ಕಾರಿ ಭೂಮಿಯನ್ನು ‌ಖರೀದಿಗೆ ಕೊಡಲು ತೀರ್ಮಾನ ಮಾಡಲಾಗಿದೆ. ಬೇಸಾಯ, ಕೈಗಾರಿಕೆ, ಧಾರ್ಮಿಕ ಶಿಕ್ಷಣಗಳಿಗೆ ಕೊಟ್ಟಿರುವ ಗುತ್ತಿಗೆ ಕೊಟ್ಟಿರುವ ಭೂಮಿಯನ್ನ ಖರೀದಿಗೆ ಕೊಡಲು ನಿರ್ಧಾರ ಮಾಡಲಾಗಿದೆ ಎಂದರು.. : - – –