ವ್ಯಕ್ತಿಗೆ ಕೊರೋನಾ ಸೋಂಕು: ಕುರುಬೂರು ಗ್ರಾಮ ಸೀಲ್ ಡೌನ್… ಮೈಸೂರು,ಜೂ,25,2020(..): ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ವ್ಯಕ್ತಿಗೆ ಕೊರೊನ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಗ್ರಾಮವನ್ನ ಸೀಲ್ ಡೌನ್ ಮಾಡಲಾಗಿದೆ. ವ್ಯಕ್ತಿ ಬೆಂಗಳೂರಿನಿಂದ ಸ್ವಗ್ರಾಮ ಕುರುಬೂರು ಗ್ರಾಮಕ್ಕೆ ಆಗಮಿಸಿದ್ದರು. ಹೀಗಾಗಿ ಸೋಂಕಿತ ವ್ಯಕ್ತಿಯ ಮನೆಯ ಸುತ್ತ ಸುತ್ತಮುತ್ತ ಸಂಚಾರ ನಿರ್ಬಂಧ ವಿಧೀಸಲಾಗಿದ್ದು ಗ್ರಾಮವನ್ನ ಸೀಲ್ಡೌನ್ ಮಾಡಲಾಗಿದೆ. ಇನ್ನು ಕೊರೋನಾ ಹಿನ್ನೆಲೆ ಕುರುಬೂರು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತ ವ್ಯಕ್ತಿಯನ್ನ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ 19 ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸೀಲ್ ಡೌನ್ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. : –-- - - .