ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಚಾರ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ…? ಬೆಂಗಳೂರು,ಜೂ,24,2020(..): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತೆ ಲಾಕ್ ಡೌನ್ ಕುರಿತು ಚರ್ಚೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಲಾಕ್ ಡೌನ್ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಹಿರಿಯ ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದಾರೆ. ಲಾಕ್ ಡೌನ್ ಬೇಡವಾ ಅಥವಾ ಬೇಕಾ ಎಂಬುದನ್ನ ಸಿಎಂ ಬಿಎಸ್ ವೈ ನಿರ್ಧರಿಸುತ್ತಾರೆ ಎಂದು ತಿಳಿಸಿದರು. : - – – .