ಎಸ್ ಎಸ್ ಎಲ್ ಸಿ ಪರೀಕ್ಷೆ: ಏನಾದರೂ ಅವಘಡ ಸಂಭವಿಸಿದರೇ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ.. ಬೆಂಗಳೂರು,ಜೂ,23,2020(..): ಕರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಗುರುವಾರದಿಂದ ರಾಜ್ಯದಾದ್ಯಂತ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ಸಲಹೆ ನೀಡಿದ್ದಾರೆ. ಹಾಗೆಯೇ ಮತ್ತೊಂದು ಟ್ವೀಟ್ ನಲ್ಲಿ ಕರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕರೋನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ ಎಂದು ಮತ್ತೊಂದು ಟ್ವೀಟ್ ನಲ್ಲಿ ಸಲಹೆ ನೀಡಿರುವ ಹೆಚ್.ಡಿಕೆ, ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. : –- – - - .