ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ತುರ್ತು ಸಭೆ ಕರೆದ ಮೇಯರ್… ಬೆಂಗಳೂರು,ಜೂ,23,2020(..): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಏರುತ್ತಲೇ ಇದ್ದು ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೇಯರ್ ಗೌತಮ್ ಕುಮಾರ್ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಿನ್ನೆ ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲವೆಂದು ಚಿಕ್ಕಪೇಟೆ ಮೂಲಕದ ಮೂವರು ಸೋಂಕಿತರನ್ನ ವಾಪಸ್ ಕಳುಹಿಸಿದ ಆರೋಪ ಕೇಳಿ ಬಂದಿದೆ. ಹೀಗಾಗಿ ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಹಾಗೆಯೇ ಸೀಲ್ ಡೌನ್ ಆದ ಏರಿಯಾಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ. ಇನ್ನು ಇಂದು ಮೇಯರ್ ಗೌತಮ್ ಕುಮಾರ್ ಕೊರೋನಾ ಸೋಂಕು ಇರುವ ಕಲಾಸಿ ಪಾಳ್ಯ ಏರಿಯಾಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - –- –