ಕೊರೋನಾ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊಂದು ಬಲಿ… ಬಳ್ಳಾರಿ ,ಜೂ,22,2020(..): ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಮಹಾಮಾರಿಗೆ ಇಂದು ಮತ್ತೊಂದು ಬಲಿಯಾಗಿದೆ. ಬಳ್ಳಾರಿಯ 62 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ವೃದ್ಧನಿಗೆ ಕೊರನಾ ವೈರಸ್ ಸೋಂಕು ಕಂಡು ಬಂದ ಹಿನ್ನೆಲೆ ಜೂನ್ 17 ರಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ವೃದ್ಧನ ಅಂತ್ಯಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಕುಲ್ ಮಾಹಿತಿ ನೀಡಿದ್ದಾರೆ. : -- -