ರಾಜ್ಯಾದ್ಯಂತ ಉದ್ಯಾನವನಗಳ ತೆರೆಯುವ ಅವಧಿಯನ್ನ ವಿಸ್ತರಿಸಿದ ರಾಜ್ಯ ಸರ್ಕಾರ… ಬೆಂಗಳೂರು, ಜೂ,2020(..): ಕರೋನಾ ಮಹಾಮಾರಿ ಲಾಕ್ ಡೌನ್ ಸಡಿಲಿಕೆ ಬಳಿಕ ರಾಜ್ಯಾದ್ಯಂತ ಉದ್ಯಾನವನಗಳನ್ನ ತೆರೆಯಲು ನೀಡಿದ್ದ ಅವಧಿಯನ್ನ ರಾಜ್ಯ ಸರ್ಕಾರ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಂಟೈನ್ ಮೆಂಟ್ ಜೋನ್ ಹೊರತುಪಡಿಸಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ/ಪುರಸಭೆ ಉದ್ಯಾನವನಗಳನ್ನ ಬೆಳಿಗ್ಗೆ 5 ರಿಂದ ರಾತ್ರಿ 9 ಗಂಟೆವರೆಗೆ ತೆರೆಯಲು ಅವಧಿ ನಿಗದಿಪಡಿಸುವಂತೆ ಮಹಾನಗರ ಪಾಲಿಕೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಹಿಂದೆ ಲಾಕ್ ಡೌನ್ ಸಡಿಲಿಕೆ ನಂತರ ಕಂಟೈನ್ ಮೆಂಟ್ ಜೋನ್ ಹೊರತುಪಡಿಸಿ ರಾಜ್ಯಾದ್ಯಂತ ಪಾರ್ಕ್ ಗಳನ್ನ ಬೆಳಿಗ್ಗೆ 7ರಿಂದ 9 ಗಂಟೆವರೆಗೆ ಹಾಗೂ ಸಂಜೆ 4 ರಿಂದ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ತೆರೆಯಲು ಅವಕಾಶ ನೀಡಿತ್ತು. ಜೂನ್ 30ರವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದು, ಕಂಟೈನ್ ಮೆಂಟ್ ಜೋನ್ ಹೊರತುಪಡಿಸಿದ ಪ್ರದೇಶಗಳಲ್ಲಿ ಹಂತ ಹಂತವಾಗಿ ನಿಷೇಧಿತ ಚಟುವಟಿಕೆಗಳನ್ನ ತೆರೆಯಲು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. : - – -