ವಿಧಾನಸೌಧದ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆ… ಬೆಂಗಳೂರು,ಜೂ,20,2020(..): ಮಹಾಮಾರಿ ಕೊರೋನಾ ಭೀತಿ ಇದೀಗ ವಿಧಾನಸೌಧಕ್ಕೂ ಎದುರಾಗಿದೆ. ಹೌದು, ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ವಿಧಾನಸೌಧದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಕಳೆದ 6 ದಿನಗಳಿಂದ ರಜೆ ಮೇಲಿದ್ದರು ಎನ್ನಲಾಗಿದೆ. ಈಗ ಇವರಿಗೆ ಮತ್ತು ಇವರ ಪತ್ನಿಗೂ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ. ಕಳೆದ ಸಚಿವ ಸಂಪುಟ ಸಭೆಯ ನಂತರ ಸಚಿವರು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಸೋಂಕಿತ ಸಿಬ್ಬಂದಿ ಭಾಗಿಯಾಗಿದ್ದರು ಎನ್ನಲಾಗಿದೆ. ಹೀಗಾಗಿ ಅಂದು ಭಾಗಿಯಾಗಿದ್ದ ಎಲ್ಲರಿಗೂ ಕೊರೋನಾ ಆತಂಕ ಶುರುವಾಗಿದ್ದು, ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದವರನ್ನ ಪತ್ತೆ ಕಾರ್ಯ ನಡೆಸಲಾಗುತ್ತಿದೆ. : - – -.