ಆಕಸ್ಮಿಕ ಘಟನೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಬಿಡುಗಡೆ… ಬೆಂಗಳೂರು,ಜೂ,19,2020(..): ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಪ್ರತ್ಯೇಕ ಘಟನೆಯಲ್ಲಿ ಏಳು ಜನ ಮೃತಪಟ್ಟಿದ್ದರು. ಮೃತಪಟ್ಟವರ ಕುಟುಂಬಕ್ಕೆ ಇದೀಗ ಪರಿಹಾರ ಬಿಡುಗಡೆ ಮಾಡಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಅವರು ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿ, ಪರಿಹಾರ ಹಣ ಮಂಜೂರು ಮಾಡಿಸಿದ್ದಾರೆ. ನಾಗಮಂಗಲ ತಾಲೂಕಿನ ಬೀರನಹಳ್ಳಿಯ ಒಂದೇ ಕುಟುಂಬದ ಗೀತಾ, ಸವಿತ, ಸೌಮ್ಯ ಅವರು ಬಟ್ಟೆ ತೊಳೆಯುವ ವೇಳೆ ಮುಳುಗಿ ಮೃತಪಟ್ಟಿದ್ದು, ಮೃತರ ಕುಟುಂಬದವರಿಗೆ 5 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಆಕಸ್ಮಿಕವಾಗಿ ಮೃತಪಟ್ಟಿರುವ ನಾಗಮಂಗಲದ ಚೋಳಸಂದ್ರ ಗ್ರಾಮದ ರಶ್ಮಿ ಹಾಗೂ ಇಂಚರ ಎರಡೂ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಕೆ.ಆರ್. ಪೇಟೆ ತಾಲೂಕಿನ ಹುಳಿಗಂಗನಹಳ್ಳಿಯ ಅಭಿಷೇಕ್ ಆಕಸ್ಮಿಕವಾಗಿ ಮೃತಪಟ್ಟಿದ್ದು, ಕುಟುಂಬದವರಿಗೆ 2 ಲಕ್ಷ ರೂ. ಮತ್ತು ಕೆ.ಆರ್.ಪೇಟೆ ಆದಿಹಳ್ಳಿ ಗ್ರಾಮದ ಕುಮಾರ್ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. : - - – -