ರಾಹುಲ್ ಗಾಂಧಿ ಹುಟ್ಟುಹಬ್ಬ ಹಿನ್ನೆಲೆ: ಕಾಂಗ್ರೆಸ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ… ಮೈಸೂರು,ಜೂ,19,2020(..): ಎಐಸಿಸಿ ಮಾಜಿ ಅಧ್ಯಕ್ಷ ಹಾಲಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಹುಟ್ಟುಹಬ್ಬ ಹಿನ್ನೆಲೆ ಮೈಸೂರು ನಗರ ಕಾಂಗ್ರೆಸ್ ವತಿಯಿಂದ ಇಂದು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮಾಡಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭ ನಡೆಯಿತು. ಕೋವಿಡ್ 19 ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಕರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆ ಆಶಾ ಕಾರ್ಯಕರ್ತೆಯರಿಗೆ ಫಲ ಪುಷ್ಪ ನೀಡಿ ಸನ್ಮಾನ ಮಾಡಲಾಯಿತು. ಸಮಾರಂಭದಲ್ಲಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ನಗರಾಧ್ಯಕ್ಷ ಆರ್ ಮೂರ್ತಿ, ಕೆಪಿಸಿಸಿ ವಕ್ತಾರ ಹೆಚ್. ಎ. ವೆಂಕಟೇಶ್, ಕೆಪಿಸಿಸಿ ಸದಸ್ಯರಾದ ಶ್ರೀನಾಥ್ ಬಾಬು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ ಸೇರಿದಂತೆ ಹಲವರ ಭಾಗಿಯಾಗಿದ್ದರು. : - -- -