ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹ: ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ…. ಬೆಂಗಳೂರು,ಜೂ,19,2020(..): ದೇಶದಲ್ಲಿ ದಿನೇ ದಿನೇ ಇಂಧನ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ, ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಮಾತ್ರ ತೈಲ ಬೆಲೆ ಏರಿಕೆಯಾಗುತ್ತಿದೆ. ಕಳೆದ 12 ದಿನಗಳಿಂದ ನಿರಂತರವಾಗಿ ಇಂಧನ ಬೆಲೆ ಏರಿಕೆಯಾಗುತ್ತಿದ್ದು, 12 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ರೇಟ್ 7 ರೂಪಾಯಿಯಷ್ಟು ಹೆಚ್ಚಳವಾಗಿದೆ. ಹೀಗಾಗಿ ಇಂಧನ ಬೆಲೆ ಏರಿಕೆಗೆ ಕಡಿವಾಣ ಹಾಕುವಂತೆ ಸಿದ್ಧರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ. : –- - –- –