ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಗೋವಿಂದರಾಜು ನಾಮಪತ್ರ ಸಲ್ಲಿಕೆ… ಬೆಂಗಳೂರು,ಜೂ,18,2020(..): ಜೂನ್ 29 ರಂದು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿಯಾಗಿ ಇಂಚರ ಗೋವಿಂದರಾಜು ನಾಮಪತ್ರ ಸಲ್ಲಿಕೆ ಮಾಡಿದರು. ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಇಂಚರ ಗೋವಿಂದರಾಜು ಅವರು ಇಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಉಪ ಸಭಾದ್ಯಕ್ಷ ಕೃಷ್ಣರೆಡ್ಡಿ, ಕೋಲಾರದ ಶಾಸಕರಾದ ಶ್ರೀನಿವಾಸ ಗೌಡ ಅವರು ಉಪಸ್ಥಿತರಿದ್ದರು. ಗೋವಿಂದರಾಜು ಅವರು ಕೋಲಾರ ಮೂಲದ ಉದ್ಯಮಿಯಾಗಿದ್ದಾರೆ. ಗೋವಿಂದರಾಜು ಅವರಿಗೆ ಜೆಡಿಎಸ್ ನಿಂದ ವಿಧಾನಪರಿಷತ್ ಟಿಕೆಟ್ ಸಿಕ್ಕ ಹಿನ್ನೆಲೆ ಟಿಕೆಟ್ ಆಕಾಂಕ್ಷಿಗಳಾಗಿದ್ದ ಕುಪೇಂದ್ರ ರೆಡ್ಡಿ ಹಾಗೂ ಶರವಣಗೆ ಅವಕಾಶ ತಪ್ಪಿದೆ. : –- - -