ಅಕ್ರಮವಾಗಿ ಸಂಗ್ರಹಿಸಿದ್ದ 180 ಕ್ವಿಂಟಲ್ ‘ಪಡಿತರ’ ಅಕ್ಕಿ ಜಪ್ತಿ. ಕಲಬುರ್ಗಿ,ಮಾರ್ಚ್,23,2024(..):ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 180 ಕ್ವಿಂಟಲ್ ಅನ್ನಭಾಗ್ಯ ಪಡಿತರ ಅಕ್ಕಿಯನ್ನ ವಶಕ್ಕೆ ಪಡೆದಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ನಗರದ ಸೋನಿಯಾ ಗಾಂಧಿ ಕಾಲೋನಿಯ ಗೋದಾಮಿನಲ್ಲಿ ಅಕ್ರಮವಾಗಿ ಅಕ್ಕಿ ದಾಸ್ತಾನು ಸಂಗ್ರಹಿಡಲಾಗಿತ್ತು. ರಾಜೀವ್ ಗಾಂಧಿ ಆಶ್ರಯ ಕಾಲೋನಿ ಮನೆಯಲ್ಲೂ ಕೂಡ ಅಕ್ರಮ ಅಕ್ಕಿಯನ್ನು ಸಂಗ್ರಹಿಸಿಟ್ಟಿದ್ದರು. ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿದ್ದರು. ಕಲಬುರ್ಗಿಯ ಎರಡು ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ 180 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಲ್ಬುರ್ಗಿಯ ವಿಶ್ವವಿದ್ಯಾಲಯ ಮತ್ತು ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : -180 - -- -