ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ… ಬೆಂಗಳೂರು,ಜೂ,17,2020(..): ಜೂನ್ 29ರಂದು ವಿಧಾನಪರಿಷತ್​ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ನಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನ ಎಐಸಿಸಿ ಘೋಷಣೆ ಮಾಡಿದೆ. ವಿಧಾನಪರಿಷತ್ ಚುನಾವಣೆಗೆ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹ್ಮದ್ ಅವರನ್ನ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಜೂನ್​ 29ರಂದು ಕರ್ನಾಟಕ ವಿಧಾನಪರಿಷತ್​ ಚುನಾವಣೆ ನಡೆಯಲಿದೆ. 7 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್​​ ಇಬ್ಬರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಜೂನ್ 29 ರಂದು ನಡೆಯುವ ಪರಿಷತ್ ಚುನಾವಣೆಗೆ ನಾಳೆ ನಾಮಪತ್ರ ಸಲ್ಲಿಸಲು ಕಡೆಯ ದಿನಾಂಕವಾಗಿದೆ. : - -- - –