ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಮೊದಲ ಪೊಲೀಸ್ ಬಲಿ.. ಬೆಂಗಳೂರು,ಜೂ,16,2020(..): ರಾಜ್ಯದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿದ್ದು ಇದೀಗ ರಾಜ್ಯದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿಯಾಗಿದ್ದಾರೆ. ಬೆಂಗಳೂರು ವಿ.ವಿ.ಪುರಂ ಸಂಚಾರಿ ಠಾಣೆ ಎಎಸ್ ಐ ಕೊರೋನಾದಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎಎಸ್ ಐ 15 ದಿನಗಳಲ್ಲಿ ನಿವೃತ್ತರಾಗಲಿದ್ದರು. ಥಣಿಸಂದ್ರದ ಮನೆಯಲ್ಲಿ ಎಎಸ್ ಐ ದಿಢೀರನೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮರಣೋತ್ತರ ತಪಾಸಣೆ ಸಂದರ್ಭದಲ್ಲಿ ಎಎಸ್ ಐಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಇನ್ನು ಅದೇ ಠಾಣೆಯ ಮತ್ತೊಬ್ಬ ಎಎಸ್ಐಗೂ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಇದೀಗ ವಿವಿಪುರಂ ಪೊಲೀಸ್ ಠಾಣೆಗೆ ಸ್ಯಾನಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. : - – - –-