ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ: ಇಲಾಖೆಗಳ ಕುಂದು ಕೊರತೆ ಆಲಿಸಿದ ಸಚಿವ ನಾರಾಯಣಗೌಡ… ಮೈಸೂರು,ಜೂ,15,2020(..): ತೋಟಗಾರಿಕೆ ಸಚಿವ ನಾರಾಯಣ ಗೌಡ ನೇತೃತ್ವದಲ್ಲಿ ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ನಗರದ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಮಟ್ಟದ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದ ಹಿನ್ನೆಲೆ, ಸಚಿವ ನಾರಾಯಣಗೌಡ ಅವರು ಇಂದ ಸಭೆ ನಡೆಸಿ ಚರ್ಚಿಸಿ ಇಲಾಖೆಗಳ ಕುಂದು ಕೊರತೆ ಆಲಿಸಿದರು. ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ನಾಗೇಂದ್ರ, ಜಿ. ಟಿ. ದೇವೇಗೌಡ, ಎಚ್. ಪಿ. ಮಂಜುನಾಥ್, ಹರ್ಷವರ್ಧನ್, ಅನಿಲ್ ಚಿಕ್ಕಮಾದು ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು. : - –- –-