ಯುಎಇನಲ್ಲಿ ಐಪಿಎಲ್ ಟೂರ್ನಿ ನಡೆಸಲು ಬಿಸಿಸಿಐ ಪ್ಲಾನ್ ! ಮುಂಬೈ, ಜೂನ್ 15, 2020 (..):ಯುಎಇನಲ್ಲಿ ಐಪಿಎಲ್ ಟೂರ್ನಿ ನಡೆಸಲು ಪ್ಲಾನ್ ಮಾಡಲಾಗಿದೆ. ಶತಾಯಗತಾಯ ಈ ವರ್ಷ ಐಪಿಎಲ್ ಟಿ-20 ಟೂರ್ನಿ ನಡೆಸಲೇಬೇಕು ಎಂದು ಹಠ ಹಿಡಿದಂತಿರುವ ಬಿಸಿಸಿಐನಿಂದ ಈ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆ ನಡೆಸಲಾಗಿದೆ. ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದಿದ್ದರೆ ದುಬೈ, ಅಬುದಾಭಿ ಮತ್ತು ಶಾರ್ಜಾದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣಗಳಿವೆ. ಅಲ್ಲಿ ಪಂದ್ಯಾವಳಿ ನಡೆಸಲು ಪ್ಲಾನ್ ರೂಪಿಸಲಾಗುತ್ತಿದೆ. ಈ ಕ್ರೀಡಾಂಗಣಗಳ ಸಮೀಪದಲ್ಲೇ ಆಟಗಾರರು ಉಳಿದುಕೊಳ್ಳಲು ಹೋಟೆಲ್ ಗಳು ಇವೆ. ಯುಎಇ ಕ್ರಿಕೆಟ್ ಮಂಡಳಿ ಆಟಗಾರರ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ – ಅಕ್ಟೋಬರ್ ನಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ತಯಾರಿ ನಡೆಸಿದೆ.