ದೇಶದಲ್ಲಿ ಒಂದೇ ದಿನ 11,502 ಮಂದಿಗೆ ಕೊರೋನಾ ಸೋಂಕು… ನವದೆಹಲಿ,ಜೂ,15,2020(..): ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಗೆಚ್ಚಾಗುತ್ತಿದ್ದು ಈ ನಡುವೆ ಒಂದೇ ದಿನ 11,502 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 325 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 9,520 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 3,32,424 ಕ್ಕೆ ಏರಿಕೆಯಾಗಿದೆ. ಈ ಪೈಕಿ 1,69,797 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. : - -11,502 – .