ಬೆಳಗಾವಿ, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುತ್ತೇವೆ- ಶಾಸಕ ಲಕ್ಷ್ಮಣ್ ಸವದಿ. ಬೆಂಗಳೂರು,ಮಾರ್ಚ್,22,2024(..):ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತಿಳಿಸಿದರು. ಇಂದು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಳಿಕ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, ಬೆಳಗಾವಿ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ. ಉತ್ತರಕನ್ನಡದಲ್ಲೂ ಗೆಲ್ಲುತ್ತೇವೆ ಅಂತಾ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ ಅಂತಾ ಏನಿಲ್ಲ . ಕಾಂಗ್ರೆಸ್ ವರ್ಸಸ್ ಬಿಜೆಪಿ ಅಂತಾ ಇದೆ ಎಂದರು. ಬೆಳಗಾವಿ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಬಿಜೆಪಿ ಅಭ್ಯರ್ಥಿಯಾಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ಶೆಟ್ಟರ್ ರನ್ನ ಸೋಲಿಸಲು ಬೆಳಗಾವಿಗೆ ಕರೆದುಕೊಂಡು ಬರುತ್ತಿದ್ದಾರೆ . ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. : - - – - – - .