ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮತ್ತಿಬ್ಬರು ಬಲಿ… ಬೆಂಗಳೂರು,ಜೂ,13,2020(..): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು ಇಂದು ಕರೋನಾ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 58 ವರ್ಷದ ಮಹಿಳೆ ಮತ್ತು 58 ವರ್ಷದ ಪುರುಷ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತ ಇಬ್ಬರು ಕಳೆದ ಮೂರು ದಿನಗಳ ಹಿಂದೆ ಕಿಮ್ಸ್ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಂದೇ ದಿನ ನಾಲ್ವರು ಬಲಿಯಾದಂತಾಗಿದೆ. ನಿನ್ನೆ ಇಬ್ಬರು, ರಾತ್ರಿ ಇಬ್ಬರು ಸಾವನ್ನಪ್ಪಿದ್ದರು. ಇದೀಗ ಇಂದು ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. : - - –