ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ… ಕೊಡಗು,ಜೂ,11,2020(..): ಮಳೆಗಾಲ ಶುರುವಾಗಿರುವ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ. ಮಳೆಗಾಲ ಹಿನ್ನೆಲೆ ಮುಂಜಾಗ್ರತೆಯಿಂದ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಮರದ ದಿಮ್ಮಿ, ಮರಳು ಸಾಗಾಟ ನಿಷೇಧಿಸಲಾಗಿದೆ. 1,62,00 ಕೆಜಿಗಿಂತ ಹೆಚ್ಚು ತೂಕದ ಸರಕುಗಳನ್ನ ಸಾಗಿಸುವಂತಿಲ್ಲ. ಈ ಆದೇಶ ಇಂದಿನಿಂದ ಆಗಸ್ಟ್ 10ರವರೆಗೆ ಜಾರಿಯಲ್ಲಿರುತ್ತದೆ. ಇನ್ನು ಅನಿಲ ಟ್ಯಾಂಕರ್ , ಬಸ್, ಹಾಲಿನ ವಾಹನಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. : –- - – -