ಬೆಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿ…. ಬೆಂಗಳೂರು,ಜೂ,10,2020(..): ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನಲ್ಲಿ 50 ವರ್ಷದ ಕೊರೋನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಪಾದರಾಯನಪುರ ನಿವಾಸಿ ಕೊರೋನಾ ವೈರಸ್ ನಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ. ಮೃತ ಸೋಂಕಿತ ವ್ಯಕ್ತಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ನಿನ್ನೆ ವ್ಯಕ್ತಿಯ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವ್ಯಕ್ತಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ನಡುವೆ ಇಂದೇ ವ್ಯಕ್ತಿ ಮೃತಪಟ್ಟಿದ್ದಾರೆ. : - – – .