ದೇಶದಲ್ಲಿ ಒಂದೇ ದಿನ 9,985 ಮಂದಿಗೆ ಕೊರೋನಾ ಸೋಂಕು…. ನವದೆಹಲಿ,ಜೂ,10,2020(..): ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಒಂದೇ ದಿನ 9,985 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ಮೂಲಕ ಭಾರತದಲ್ಲಿ ಇದುವರೆಗೆ ಕೊರೋನಾ ಸೋಂಕಿತರ ಸಂಖ್ಯೆ 2,76,583ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಒಂದೇ ದಿನ 279 ಮಂದಿ ಕೊರೋನಾಗೆ ಬಲಿಯಾಗಿದ್ದು ಸಾವಿನ ಸಂಖ್ಯೆ ಕೂಡ 7,745 ಕ್ಕೆ ಏರಿಕೆಯಾಗಿದೆ. 1,35,206 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 1,35,206 ಮಂದಿ ಸೋಂಕಿನಂದ ಬಳಲುತ್ತಿದ್ದಾರೆ. : - - 9,985 – -