ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಬುಲೆಟ್ ನಾಪತ್ತೆ ಕೇಸ್: ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆ… ಮೈಸೂರು,ಜೂ,10,2020(..): ಟಿ ನರಸಿಪುರ ಪೊಲೀಸ್ ಠಾಣೆಯಲ್ಲಿ ಗುಂಡು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ. ಟಿ ನರಸೀಪುರ ಪೊಲೀಸ್ ಠಾಣೆಯಿಂದ 303 ಮಾದರಿಯ ಬಂದೂಕಿನ 50 ಗುಂಡುಗಳು ನಾಪತ್ತೆಯಾಗಿದ್ದವು. ಈ ಸಂಬಂಧ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರು ಇಬ್ಬರನ್ನು ಅಮಾನತುಗೊಳಿಸಿದ್ದರು. ಈ ಕುರಿತು ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಸುಳಿವಿನ ಆಧಾರದ ಮೇಲೆ ಕಪಿಲಾ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಎಎಸ್‌ಪಿ ಸ್ನೇಹ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, 2 ಗಂಟೆಗಳ ಶೋಧದ ನಂತರ 20 ಗುಂಡುಗಳು ಪತ್ತೆಯಾಗಿವೆ. ಉಳಿದ 30 ಗುಂಡುಗಳ ಪತ್ತೆಗಾಗಿ‌ ಶೋಧಕಾರ್ಯ ಮುಂದುವರೆದಿದೆ. : - –.- -20 -