ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್… ಚಾಮರಾಜನಗರ,ಜೂ,9,2020(..): ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಬೇಟೆಗಾರರನ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಇಬ್ಬರು ಬೇಟೆಗಾರರನ್ನ ಬಂಧಿಸಲಾಗಿದೆ. ಬಂಧಿತರಿಂದ ನಾಡ ಬಂದೂಕು, ಬುಲೆಟ್ ಗಳು ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಇಬ್ಬರು ಬೇಟೆಗಾರರು ಬಂದೂಕಿನ ಸಹಾಯದಿಂದ ಪ್ರಾಣಿಗಳನ್ನು ಭೇಟೆಯಾಡುತ್ತಿದ್ದರು. ಈ ನಡುವೆ ಅರಣ್ಯ ಸಿಬ್ಬಂದಿಗಳ ಗಸ್ತಿನ ವೇಳೆ ಬೇಟೆಗಾರರು ಸಿಕ್ಕಿಬಿದ್ದಿದ್ದು ಅರಣ್ಯ ಇಲಾಖೆ ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದೆ. : - - -