ಒಂದೇ ದಿನ ದೇಶದಲ್ಲಿ 9,887 ಮಂದಿಗೆ ಕೊರೋನಾ ಸೋಂಕು…. ಬೆಂಗಳೂರು,ಜೂ,6,2020(..): ದೇಶದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ರಣಕೇಕೆಯಾಕುತ್ತಿದ್ದು ಒಂದೇ ದಿನ ದೇಶದಲ್ಲಿ ಸುಮಾರು 9,887 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 9,887 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 2,36,184ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ ದೇಶದಲ್ಲಿ 294 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈವರೆಗೆ ಒಟ್ಟು 6649 ಮಂದಿ ಮಹಾಮಾರಿ ಕೊರೋನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. : - - 9,887 – -