ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯಸಭೆ ಟಿಕೆಟ್ : ಎಐಸಿಸಿಯಿಂದ ಅಧಿಕೃತ ಘೋಷಣೆ…. ಬೆಂಗಳೂರು,ಜೂ,5,2020(..): ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಿಕೆಟ್ ನೀಡಲಾಗಿದೆ. ಈ ಬಗ್ಗೆ ಎಐಸಿಸಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಾಜ್ಯಸಭೆಗೆ ಆಯ್ಕೆ ಮೂಲಕ ಮಲ್ಲಿಕಾರ್ಜುನ ಖರ್ಗೆ ಸಂಸತ್ ಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ರಾಜ್ಯಸಭೆ ನಾಲ್ಕು ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗ ಅವರು ಕಲ್ಬುರ್ಗಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. : - - - –