ಮೆಟ್ರೋ ರೈಲ್ವೆ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣು: ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ. ಬೆಂಗಳೂರು,ಮಾರ್ಚ್,21,2024(..):ಮೆಟ್ರೋ ರೈಲ್ವೆ ಟ್ರ್ಯಾಕ್ ಗೆ ಜಿಗಿದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಉತ್ತರ ಭಾರತದಿಂದ ಬಂದಂತಹ ಯುವಕ ಎನ್ನಲಾಗಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ರೈಲು ಬರುವ ವೇಳೆ ಟ್ರ್ಯಾಕ್ ಗೆ ಜಿಗಿದಿದ್ದಾನೆ. ಈ ವೇಳೆ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆದರೆ ಚಿಕಿತ್ಸೆ ಫಲಿಸದೇ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಸ್ಥಳಕ್ಎಕ ಬಿಎಂಆರ್ ಸಿಎಲ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಚಂದ್ರಾ ಲೇಔಟ್ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಮೆಟ್ರೋ ಸಂಚಾರ ಸ್ಥಗಿತ ಹಿನ್ನೆಲೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. : - - – –-