ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ. ಹುಬ್ಬಳ್ಳಿ, ಮಾರ್ಚ್,21,2024(..):ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮರಿತಿಬ್ಬೇಗೌಡ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆಯನ್ನ ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ. ಹೆಚ್​ಡಿ ದೇವೇಗೌಡ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಅವರು ಜೆಡಿಎಸ್ ಪಕ್ಷಕ್ಕೂ ಗುಡ್ ​ಬೈ ಹೇಳಿದ್ದಾರೆ. ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು. ಅಲ್ಲದೆ, ಕೆಲವು ವೈಯಕ್ತಿಕ ಕಾರಣದಿಂದ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದರು. ಹೆಚ್ ಡಿ ದೇವೆಗೌಡ, ಹೆಚ್. ​ಡಿ ಕುಮಾರಸ್ವಾಮಿ ಅವರು ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ನಾವು ಈ ವಿಷಯ ಅವರಿಗೆ ಹೇಳಿದರೆ, ಅದು ನಮ್ಮ ವರಿಷ್ಠರಿಗೆ ಹಿಡಿಸಲಿಲ್ಲ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದರು. :- - –-