ಲೋಕಸಭೆ ಚುನಾವಣೆ: ಗೆಲ್ಲಬಹುದಾದ ಹೊಸಬರಿಗೆ ಸಮರ್ಥರಿಗೆ ಟಿಕೆಟ್ ನೀಡಿದ್ದೇವೆ-ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು, ಮಾರ್ಚ್,21,2024(..):ಈ ಬಾರಿ ಲೋಕಸಭೆ ಚುನಾವಣೆಗೆ ಗೆಲ್ಲಬಹುದಾದ ಹೊಸಬರಿಗೆ, ಸಮರ್ಥರಿಗೆ ಟಿಕೆಟ್ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಮೊದಲ ಬಾರಿ ಇಷ್ಟೊಂದು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದರು. ತಮಿಳುನಾಡು ಯುಪಿ ಟಿಕೆಟ್ ಬಗ್ಗೆ ಚರ್ಚೆಯಾಗುತ್ತದೆ. ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದೆ. ಇಂದು ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ’ ಎಂದರು. : - - – – – .