ಬಿಲ್ ಕಲೆಕ್ಟರ್ ಅನುಮಾನಾಸ್ಪದ ಸಾವು: ಆಶಾ ಕಾರ್ಯಕರ್ತೆ ಮನೆ ಮುಂದೆ ಶವವಾಗಿ ಪತ್ತೆ…. ಚಾಮರಾಜನಗರ,ಜೂ,3,2020(..): ರಾತ್ರಿ ಮನೆಯಿಂದ ಹೊರ ಹೋಗಿದ್ದ ಬಿಲ್ ಕಲೆಕ್ಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ವೆಂಕಟಯ್ಯನಛತ್ರ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಬಸವರಾಜು(38) ಮೃತಪಟ್ಟವರು. ಬಸವರಾಜು ಕಳೆದ ರಾತ್ರಿ ಮನೆಯಿಂದ ಹೋರಹೋಗಿದ್ದರು. ಈ ನಡುವೆ ಆಶಾ ಕಾರ್ಯಕರ್ತೆ ಶಾರದಾ ಎಂಬುವವರ ಮನೆಯ ಮುಂದೆ ಬಸವರಾಜು ಶವವಾಗಿ ಪತ್ತೆಯಾಗಿದ್ದಾರೆ. ಬೈಕ್ ಮಾತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗ ನಿಂತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬಸವರಾಜು ಕೋವಿಡ್19 ಹಿನ್ನೆಲೆಯಲ್ಲಿ ಹರದನಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಷುವರಿಯಾಗಿ ಕೆಲಸ ಮಾಡುತ್ತಿದ್ದರು. ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. : - - -