ವಿದ್ಯುತ್ ಬಿಲ್ ಏರಿಕೆ ಹಾಗೂ ಖಾಸಗೀಕರಣ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ… ಮೈಸೂರು,ಜೂ,3,2020(..): ವಿದ್ಯುತ್ ಬಿಲ್ ಏರಿಕೆ ಖಾಸಗೀಕರಣ ವಿರೋಧಿಸಿ ಮೈಸೂರಿನಲ್ಲಿ ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಮೈಸೂರು ಕನ್ನಡ ವೇದಿಕೆ ಸದಸ್ಯರು ಸರ್ಕಾರದ ಜನ ವಿರೋಧಿ ನೀತಿ ವಿರುದ್ದ ಮೌನ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಭಟನಾಕಾರರು ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ ಸೇರಿದಂತೆ ಇತರರು ಭಾಗಿಯಾಗಿದ್ದರು. : – - - - -