ನಾನು ಯಾವುದೇ ಕಾರಣಕ್ಕೂ ರಾಜ್ಯಸಭೆಗೆ ಸ್ಪರ್ಧಿಸುವುದಿಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ…. ರಾಮನಗರ,ಜೂ,2,2020(..): ನಾನು ಯಾವುದೇ ಕಾರಣಕ್ಕೂ ರಾಜ್ಯಸಭೆಗೆ ಸ್ಪರ್ಧಿಸುವುದಿಲ್ಲ. ರಾಜ್ಯಸಭೆಗೆ ಸ್ಪರ್ಧಿಸುವ ವಿಚಾರ ಸುಳ್ಳು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ರಾಮನಗರದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರೈತರ ಪರ ಹೋರಾಟ ಮಾಡಲು ಬಿಜೆಪಿ- ಕಾಂಗ್ರೆಸ್ ನಾಯಕರಿಂದ ನಾನು ಹೇಳಿಸಿಕೊಳ್ಳಬೇಕಿಲ್ಲ. ನಾವು ಹೋರಾಟ ಮಾಡಿಕೊಂಡು ಬಂದವರು. ನಾಟಕ ಮಾಡಿಕೊಂಡು ಬೆಳೆದು ಬಂದಿಲ್ಲ ಬಡವರು ಎಂದಾದರೇ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ತಿಳಿಸಿದರು. ರಾಮನಗರದಲ್ಲಿ ನಮ್ಮ ಕಾರ್ಯಕರ್ತರು ಶಕ್ತಿಯುತವಾಗಿದ್ದಾರೆ. ಚೆನ್ನಪಟ್ಟಣ ಕ್ಷೇತ್ರ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ ಹೆಚ್.ಡಿ ಕುಮಾರಸ್ವಾಮಿ, ರಾಮನಗರದಲ್ಲಿ ನಮ್ಮ ಕಾರ್ಯಕರ್ತರು ಶಕ್ತಿಯುತರಾಗಿದ್ದಾರೆ. ಡಬಲ್ ಗೇಮ್ ರಾಜಕಾರಣ ಬೇಡ ಎಂದು ಕಾಂಗ್ರೆಸ್ ಗೆ ಪರೋಕ್ಷ ಟಾಂಗ್ ನೀಡಿದರು. ಹಾಗೆಯೇ ನಾನು ಯಾರ ಋಣದಲ್ಲೂ ಇಲ್ಲ. ಕಾಂಗ್ರೆಸ್ ಗೆ ಬೇಕಿತ್ತು ಹೀಗಾಗಿ ನನ್ನನ್ನ ಸಿಎಂ ಮಾಡಿದರು. ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಎಲ್ಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು. : – – - - -.