ಜುಲೈ 8ಕ್ಕೆ ಪಿಯುಸಿ ಫಲಿತಾಂಶ… ಮೈಸೂರು,ಮೇ,29,2020(..): ಜುಲೈ 8ರಂದು ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಸುರೇಶ್ ಕುಮಾರ್, ಪಿಯುಸಿ ಮೌಲ್ಯಮಾಪನ ಈಗಾಗಲೇ ಆರಂಭವಾಗಿದೆ. ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದೆ. ಅದಕ್ಕೂ ವೇಳಾಪಟ್ಟಿ ನಿಗದಿಯಾಗಿದೆ. ಜುಲೈ 8 ಅಥವಾ ಒಂದೆರಡು ದಿನಗಳ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್ಎಸ್​ಎಲ್​ಸಿ ಪರೀಕ್ಷೆಗಳಿಗೆ ವೇಳಾಪಟ್ಟಿ ಬಿಡುಗಡೆಯಾಗಿದೆ. ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಜುಲೈ ಅಂತ್ಯದಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸುರೇಶ್ ಕುಮಾರ್ ಹೇಳಿದರು. : 2ndPUC- – - 8th.