ಮಾ.22 ರಂದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ನವದೆಹಲಿ,ಮಾರ್ಚ್,20,2024(..):ಮಾರ್ಚ್ 22 ರಂದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮಾರ್ಚ್ 22 ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಅಮಿತ್ ಶಾ, ಜೆಪಿ ನಡ್ಡಾ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಮಾರ್ಚ್ 22 ರಂದು ಅಧಿಕೃತವಾಗಿ ಅಭ್ಯರ್ಥಿಗಳ ಘೋಷಣೆ ಆಗುತ್ತೆ. ಜೆಡಿಎಸ್ ಬಿಜೆಪಿ ಒಟ್ಟಾಗಿ 28 ಕ್ಷೇತ್ರವನ್ನು ಗೆಲ್ಲುತ್ತೇವೆ. ರಾಜ್ಯದ ಉದ್ದಗಲಕ್ಕೂ ನಾವು ಪ್ರವಾಸ ಮಾಡುತ್ತೇವೆ ಎಂದು ಅವರು ತಿಳಿಸಿದರು. ಇನ್ನು ಎಲ್ಲಾ ಅತೃಪ್ತರ ಜೊತೆ ನಾನು ಮಾತನಾಡುತ್ತೇನೆ. ಮಾಧುಸ್ವಾಮಿ ಜೊತೆ ನಾನು ಮಾತನಾಡುತ್ತೇನೆ. ಮಾಧುಸ್ವಾಮಿ ಅವರಿಗೆ ಚುನಾವಣೆಗೆ ನಿಲ್ಲುವ ಆಪೇಕ್ಷೆ ಇತ್ತು. ಅದ್ದರಿಂದ ಹಾಗೆ ಮಾತನಾಡಿದ್ದಾರೆ. ಕರಡಿ ಸಂಗಣ್ಣ ನಿಷ್ಠಾವಂತ ಕಾರ್ಯಕರ್ತರು ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು. ಟಿಕೆಟ್ ವಂಚಿತರನ್ನ ಸಮಾಧಾನಪಡಿಸುತ್ತೇವೆ. ಎಲ್ಲವೂ ಸರಿ ಹೋಗುತ್ತೆ ಯಾವುದೇ ಗೊಂದಲವಿಲ್ಲ ಎಂದು ಬಿಎಸ್ ವೈ ತಿಳಿಸಿದರು. : 22- – – -- - .