ಮುಂದಿನ ವಾರದಿಂದ ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನ ಶುರು ಬೆಂಗಳೂರು, ಮೇ 23, 2020 (..):ಮುಂದಿನ ವಾರದಿಂದ ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಒಟ್ಟು 54 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ. ಜೂನ್‌ ಅಂತ್ಯದ ವೇಳೆಗೆ ಮೌಲ್ಯಮಾಪನ ಕೊನೆಗೊಳ್ಳುವ ನಿರೀಕ್ಷೆ ಇದೆ. ಈಗಾಗಲೇ ರಾಜ್ಯದ 8 ಕೇಂದ್ರಗಳಲ್ಲಿ ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ. ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ ಮತ್ತು ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಉತ್ತರ ಪತ್ರಿಕೆಗಳ ಕುರಿತಂತೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶಿಬಿರಾಧಿಕಾರಿಗಳಿಗೆ ಕೋಡಿಂಗ್‌ ವ್ಯವಸ್ಥೆ ಮಾಡಲಾಗಿದೆ.