ಸಾಲದ ಮೇಲಿನ ಇಎಂಐ ಪಾವತಿ ಅವಧಿ ಮತ್ತೆ ಮೂರು ತಿಂಗಳು ವಿಸ್ತರಣೆ ಮುಂಬೈ, ಮೇ 22, 2020 (..):ಸಾಲದ ಮೇಲಿನ ಇಎಂಐ ಪಾವತಿಯನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. ಲಾಕ್ ಡೌನ್ ಆರ್ಥಿಕ ಬಿಕ್ಕಟ್ಟಿಗೆ ಹಲವು ಕ್ರಮಗಳನ್ನು ಪ್ರಕಟಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇಂದು ಮತ್ತೆ ಸಾಲದ ಮೇಲೆ ಇಎಂಐ ಪಾವತಿದಾರರಿಗೆ ಕೊಂಚ ನಿಟ್ಟುಸಿರು ಬಿಡುವ ಸಿಹಿ ಸುದ್ದಿ ನೀಡಿದೆ. ಇಎಂಐ ಪಾವತಿಯನ್ನು ಮೂರು ತಿಂಗಳಿಗೆ ಅಂದರೆ ಜೂನ್ 1ಕ್ಕೆ ವಿಸ್ತರಿಸಿದ್ದ ಆರ್ ಬಿಐ ಇದೀಗ ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಇದರಿಂದ ಗೃಹ ಸಾಲ ಸೇರಿದಂತೆ ನಾನಾ ಸಾಲ ಪಡೆದು ಇಎಂಐ ಪಾವತಿಸುವವರಿಗೆ ಕೊಂಚ ಆರ್ಥಿಕ ಹೊರೆ ಸದ್ಯದ ಮಟ್ಟಿಗೆ ಇಳಿಕೆಯಾಗಲಿದೆ.