ಪ್ರಧಾನಿ ಸಭೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಪ್ಯಾಕೇಜ್’ಗೆ ಬಿಎಸ್ವೈ ಒತ್ತಾಯಿಸಲಿ: ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ಬೆಂಗಳೂರು, ಮೇ 11, 2020 (..):ಕೊರೊನಾ ವೈರಸ್ ನಿಯಂತ್ರಣ, ಲಾಕ್ ಡೌನ್ ಕುರಿತಂತೆ ಇಂದು ಪ್ರಧಾನ ಮಂತ್ರಿ @ ಅವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಸಿಎಂ @ ಅವರೂ ಇರಲಿದ್ದಾರೆ. ಈ ಸಭೆಯಲ್ಲಿ ಬಿಎಸ್ವೈ ಅವರು ರಾಜ್ಯಕ್ಕೆ ‘ಕೋವಿಡ್ ಪ್ಯಾಕೇಜ್’ ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಎಚ್ಡಿಕೆ ಕೆಲವೊಂದು ಸಲಹೆ, ಒತ್ತಾಯ ಮಾಡಿದ್ದಾರೆ… ‘ಕೋವಿಡ್ ಪ್ಯಾಕೇಜ್’ ಜೊತೆಗೆ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಬಿಎಸ್ವೈ ಮೋದಿ ಜೊತೆಗಿನ ಸಭೆಯಲ್ಲಿ ಕೇಳಬೇಕು. ಲಾಕ್ ಡೌನ್ ನಿಂದಾಗಿ ರಾಜ್ಯ ಹಣಕಾಸಿನ ತೊಂದರೆ ಅನುಭವಿಸುತ್ತಿದೆ. ಈ ಹೊತ್ತಲ್ಲಿ ಕೇಂದ್ರದಿಂದ ಸೂಕ್ತ ನೆರವು ಬಾರದ ಹೊರತು ಕೋವಿಡ್ ನಿಯಂತ್ರಣ ಕಷ್ಟವಾಗಲಿದೆ. ಕೊರೊನಾ ವೈರಸ್ ನಿಯಂತ್ರಣ, ಲಾಕ್ ಡೌನ್ ಕುರಿತಂತೆ ಇಂದು ಪ್ರಧಾನ ಮಂತ್ರಿ @ ಅವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಸಿಎಂ @ ಅವರೂ ಇರಲಿದ್ದಾರೆ. ಈ ಸಭೆಯಲ್ಲಿ ಬಿಎಸ್ವೈ ಅವರು ರಾಜ್ಯಕ್ಕೆ ‘ಕೋವಿಡ್ ಪ್ಯಾಕೇಜ್’ ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು.